ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ, ದಸರಾ ಮಹೋತ್ಸವ -2022ರ
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ, ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಶಾಸಕರಾದ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೆಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ. ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ, ಸುಬ್ರಹ್ಮಣ್ಯಗೌಡ, ಮತ್ತಿತರರು ಉಪಸ್ಥಿತರಿದ್ದರು.