Mysuru Dasara

pressnote-oct8kan

8th ಅಕ್ಟೋಬರ್, 2021

ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಡೆ ಕಾಗೇರಿ

ಮೈಸೂರು, ಅಕ್ಟೋಬರ್ 7(ಕರ್ನಾಟಕ ವಾರ್ತೆ): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಆಯೋಜಿಸಿರುವ ದಸರಾ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು, ಸಂಸ್ಕಾರ, ಸಂಸ್ಕೃತಿಗೆ ಮೈಸೂರು ಹೆಸರುವಾಸಿಯಾಗಿದೆ. ದಸರಾ ಮಹೋತ್ಸವವನ್ನು ಕರ್ನಾಟಕದಲ್ಲಿ ಮಾತ್ರವಲ್ಲದೇ ದೇಶ, ವಿದೇಶಗಳಲ್ಲಿ ಎಲ್ಲರೂ ನೋಡುವಂತಹ ಪಭಾವಿತ ವೈವಿಧ್ಯಮಯವಾದ ಹಬ್ಬವಾಗಿದೆ. ಇಂತಹ ಅಪರೂಪ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿರುವುದು ಚಿರಸ್ಮರಣೀಯ ಎಂದು ಹರ್ಷ ವ್ಯಕ್ತಪಡಿಸಿದರು.

ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತಾನಾಡಿ, ಸಾಂಸ್ಕೃತಿಕತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಇಡೀ ರಾಷ್ಟ್ರಕ್ಕೆ ಮೈಸೂರು ಮಾದರಿಯಾಗಿದೆ. ಇದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ. ಮೈಸೂರಿನ ರಾಜರಾಗಿ ಪ್ರಜಾಪ್ರಭುತ್ವದ ಆಡಳಿತ ನೀಡುತ್ತಾ ನಾಡಿಗೆ ಶಕ್ತಿ ತುಂಬಿದ್ದು ಅವಿಸ್ಮರಣೀಯ ಎಂದರು.

ಸರ್ಕಾರವು ಕಲೆ ಮತ್ತು ಸಂಸ್ಕೃತಿಗೆ ಮಹತ್ವ ನೀಡಿ ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಅಲೆಯನ್ನು ನಿರ್ಮಾಣ ಮಾಡುವ ಪ್ರಯತ್ನ ನಡೆಸಿರುವುದು ಸಂತಸದ ಸಂಗತಿ‌ಯಾಗಿದೆ. ಮೈಸೂರಿನ ಸಂಸ್ಕೃತಿ ಸೇರಿದಂತೆ ಹತ್ತು- ಹಲವು ವಿಶೇಷತೆಗಳನ್ನು ವೇದಿಕೆಯಲ್ಲಿ ಸ್ಮರಿಸುವ ಮೂಲಕ ಉನ್ನತ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ನಾಡನ್ನು ಇನ್ನಷ್ಟು ಸಮೃದ್ಧಿಗೊಳಿಸಲು ಎಲ್ಲರೂ ಮುಂದಾಗಬೇಕೆಂದು ಆಶಯ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಖ್ಯಾತ ಮೃದಂಗ ವಿದ್ವಾಂಸಕರಾದ ಎ.ವಿ.ಆನಂದ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ವಿ. ಸುನಿಲ್ ಕುಮಾರ್, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ, ನಿಗಮ ಮಂಡಳಿ ಅಧ್ಯಕ್ಷರಾದ ಹೆಚ್.ವಿ. ರಾಜೀವ್, ರಘು ಆರ್.ಕೌಟಿಲ್ಯ, ಎನ್.ವಿ.ಫಣೀಶ್, ಅಪ್ಪಣ್ಣ , ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ರಂಗಪ್ಪ, ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.